ನವದೆಹಲಿ: ಮುಸ್ಲಿಮರ ಮನೆಗಳನ್ನು ಅಕ್ರಮವಾಗಿ ಧ್ವಂಸಗೊಳಿಸುತ್ತಿರುವ ಉತ್ತರ ಪ್ರದೇಶದ ಸರ್ಕಾರದ ಕ್ರಮವನ್ನು ವಿರೋಧಿಸಿ ನವದೆಹಲಿಯಲ್ಲಿಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಯುಪಿ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದವು.
ಫೆಟರ್ನಿಟಿ ಮೂವ್ ಮೆಂಟ್, ಎಸ್ ಐಒ, ಎಂಎಸ್ ಎಫ್ , ಸಿಎಫ್ಐ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ವಿದ್ಯಾರ್ಥಿ ನಾಯಕರು ಭಿತ್ತಿಪತ್ರ ಹಿಡಿದು ಯು.ಪಿ.ಭವನಕ್ಕೆ ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದಾಗ ಮಾರ್ಗ ಮಧ್ಯೆ ದೆಹಲಿ ಪೊಲೀಸರು, ನಾಯಕರನ್ನು ತಡೆದರು. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ವಿದ್ಯಾರ್ಥಿಗಳನ್ನು ಎಳೆದಾಡಿ ವಶಕ್ಕೆ ಪಡೆದರು.
ಪೊಲೀಸರ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.