ಮಂಗಳೂರು: ಉಳಾಯಿಬೆಟ್ಟು ಪರಾರಿ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಕೊಲೆ ಖಂಡಿಸಿ ಆರೋಪಗಳನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ವತಿಯಿಂದ ನಗರದ ಹೊರವಲಯದ ಪರಾರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಉಳಾಯಿಬೆಟ್ಟು 2 ನೇ ವಾರ್ಡ್ ಗ್ರಾಮ ಪಂಚಾಯತ್ ಸದಸ್ಯ ಅಝರ್ ಉಳಾಯಿಬೆಟ್ಟು ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಪಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೆ ಮಾತ್ರ ಇಂತಹ ದುರ್ಘಟನೆಗಳಿಗೆ ಕಡಿವಾಣ ಸಾಧ್ಯ. ಹೊರ ರಾಜ್ಯ, ಜಿಲ್ಲೆಗಳಿಂದ ಬರುವಂತಹ ಕಾರ್ಮಿಕರ ಮೇಲೆ ನಿಗಾ ವಹಿಸುವ ಅನಿವಾರ್ಯತೆಯಿದೆ. ಇಲ್ಲಿ ನಡೆಯುತ್ತಿರುವ ಹೆಚ್ಚಿನ ಕಾಮಗಾರಿಗಳಲ್ಲಿ ಹೊರ ಜಿಲ್ಲೆ, ರಾಜ್ಯದ ಅದರಲ್ಲೂ ಯುಪಿ ಬಿಹಾರದ ಕಾರ್ಮಿಕರಿದ್ದು ಇದರ ಬಗ್ಗೆ ಜಿಲ್ಲಾಡಳಿತ ಹೆಚ್ಚು ಮುತುವರ್ಜಿ ವಹಿಸಿ ಜಿಲ್ಲೆಯ ಕಾರ್ಮಿಕರಿಗೇ ಕಾಮಗಾರಿ ನೀಡುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಮಾತ್ರವಲ್ಲದೆ ಜಿಲ್ಲೆಯ ಮೌಲಾನಾ ಆಝಾದ್ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಇಲ್ಲೂ ಯು.ಪಿ ಬಿಹಾರ ಮೂಲದವರೇ ಹೆಚ್ಚಾಗಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಸಫ್ರಾರ್ಝ್ ಮಾತನಾಡಿ, ಪೊಲೀಸ್ ಇಲಾಖೆ ಈ ಘಟನೆ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಮನವಿ ಮಾಡಿದರು.