ರೇಣುಕಾಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

Prasthutha|

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ವೀರಶೈವ ಲಿಂಗಾಯತ, ಜಂಗಮ ಸಮುದಾಯ ಸೇರಿ ವಿವಿಧ ಸಮುದಾಯಗಳ ಸದಸ್ಯರು ನಟ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.


ರಾಜ್ಯದಾದ್ಯಂತ ದರ್ಶನ್ ಸಿನಿಮಾಗಳು ಬಿಡುಗಡೆಯಾಗಬಾರದು. ಸಾರ್ವಜನಿಕರು ಕೂಡ ಅವರ ಚಿತ್ರ ಬಹಿಷ್ಕರಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

Join Whatsapp