Home Uncategorized ಹೆಚ್ಚುತ್ತಿರುವ ಹುಲಿ ದಾಳಿ ಪ್ರಕರಣ: ರಾಜ್ಯ ರೈತ ಸಂಘದಿಂದ ಪೊನ್ನಂಪೇಟೆಯಲ್ಲಿ ಪ್ರತಿಭಟನೆ

ಹೆಚ್ಚುತ್ತಿರುವ ಹುಲಿ ದಾಳಿ ಪ್ರಕರಣ: ರಾಜ್ಯ ರೈತ ಸಂಘದಿಂದ ಪೊನ್ನಂಪೇಟೆಯಲ್ಲಿ ಪ್ರತಿಭಟನೆ

ಮಡಿಕೇರಿ: ಇತ್ತೀಚೆಗೆ ಕುಂದಾ ಗ್ರಾಮದಲ್ಲಿ ನಿರಂತರವಾಗಿ ನಡೆಯುತ್ತಿರುವ ಜಾನುವಾರುಗಳ ಮೇಲೆ ಹುಲಿ ದಾಳಿ ಪ್ರಕರಣ ಹಾಗೂ ಅರಣ್ಯ ಇಲಾಖೆಯವರ ಬೇಜವಾಬ್ದಾರಿತನದ ಕಾರ್ಯಾಚರಣೆಯ ವಿರುದ್ಧ ಸೋಮವಾರ ರೈತ ಸಂಘದ ಕಾರ್ಯಕರ್ತರು ಪೊನ್ನಂಪೇಟೆ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊನ್ನಂಪೇಟೆ ತಾಲೂಕಿನ ಎಲ್ಲಾ ಹೋಬಳಿಯ ಪದಾಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.

  ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಜಿಲ್ಲಾ ಕಾರ್ಯದರ್ಶಿ ಸುಜಯ್ ಬೋಪಯ್ಯ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಹೋಬಳಿ ಆಲೆಮಾಡ ಮಂಜುನಾಥ್ ಹಾಗೂ ಚೊಟ್ಟೆಕಾಳಪಂಡ ಮನು, ಗ್ರಾಮಸ್ಥರು ಹಾಗೂ ಹೋಬಳಿ ಮಟ್ಟದ ರೈತ ಮುಖಂಡರು ಪಾಲ್ಗೊಂಡಿದ್ದರು.

 ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಹೇಳಿಕೆ ನೀಡಬೇಕು ಎಂದು ರೈತರು ಒತ್ತಾಯಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದರಿಂದ ಒಂದು ಗಂಟೆ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

Join Whatsapp
Exit mobile version