ಬೆಂಗಳೂರು: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂದ್, ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ, ಕೋರ್ಟ್ ಆದೇಶ ಧಿಕ್ಕರಿಸುತ್ತೇವೆ ಎಂದು ಹೇಳಿಲ್ಲ, ಅಸಮಾಧಾನ ಇದೆ ಹಾಗಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಎಲ್ಲರಿಗೂ ಅವಕಾಶ ಇದೆ ಎಂದು ಹೇಳಿದ್ದಾರೆ.