ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ SDPI ವತಿಯಿಂದ ಇಂದು ಪ್ರತಿಭಟನೆ

Prasthutha|

ಬೆಳ್ತಂಗಡಿ: ಮಸೀದಿಯ ಮತ್ತು ಮುಸ್ಲಿಮರ ವಿರುದ್ಧ ಗಂಭೀರ ಸುಳ್ಳಾರೋಪ ಮಾಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ
ಸಮಯ ಸಂಜೆ 4 ಗಂಟೆಗೆ ಪ್ರತಿಭಟನೆ ನಡೆಯಲಿದೆ.

ಸಮಾಜದಲ್ಲಿ ನಿರಂತರವಾಗಿ ಕ್ಷೋಭೆ ಸೃಷ್ಟಿಸುತ್ತಿರುವ ಅವಿವೇಕಿ ಶಾಸಕನ ಬಂಧಿಸುವಂತೆ ಒತ್ತಾಯಿಸಿ ನಡೆಯುವ ಪ್ರತಿಭಟನೆಗೆ ಸರ್ವರೂ ಪಾಲ್ಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ತಿಳಿಸಿದೆ.

Join Whatsapp
Exit mobile version