ಚಂಡೀಗಢ: ಪ್ರಧಾನಿ ನರೇಂದ್ರ ಮೋದಿಯನ್ನು ಪಂಜಾಬ್ ನಲ್ಲಿ ಪ್ರತಿಭಟನಕಾರರು ನಡು ರಸ್ತೆಯಲ್ಲಿ ತಡೆದು ವಾಪಸು ಕಳುಹಿಸಿದ ಘಟನೆ ನಡೆದಿದೆ.
ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿಯವರು 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.