Home ಟಾಪ್ ಸುದ್ದಿಗಳು ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ: ಮಾವ ಇನ್ಫೋಸಿಸ್ ನಾರಾಯಣಮೂರ್ತಿ

ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ: ಮಾವ ಇನ್ಫೋಸಿಸ್ ನಾರಾಯಣಮೂರ್ತಿ

ನವದೆಹಲಿ: ಬ್ರಿಟನ್ ಪ್ರಧಾನಿ ಹುದ್ದೆಗೆ ಏರಿದ ರಿಷಿ ಸುನಕ್ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಮಾವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ್ದಾರೆ.

ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ, ರಿಷಿ ಸುನಕ್ ಅವರು ಬ್ರಿಟನ್ ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಳಿಯನಿಗೆ ಉನ್ನತ ಸ್ಥಾನಕ್ಕೇರಿ ಇತಿಹಾಸ ಸಷ್ಟಿಸಿದ್ದಕ್ಕೆ ನಾರಾಯಣಮೂರ್ತಿ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

Join Whatsapp
Exit mobile version