ಬೆಂಗಳೂರು: ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಸಿಎಂ ಆಫ್ ಕರ್ನಾಟಕದಿಂದ ಟ್ವೀಟ್ ಮಾಡಲಾಗಿದ್ದು, ಮೂರು ಜಿಲ್ಲೆಯ ಉತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆಯೂ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು, ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸೂಚಿಸಲಾಗಿದೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಲಾಗಿದೆ.