ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಬಿಜೆಪಿಯ ಇತರ ಹಲವು ಹಿರಿಯ ನಾಯಕರ ವಿರುದ್ಧ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗೆ ಕೋರ್ಟ್ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿ.ಆರ್. ನಾಯ್ಡು ಎಂಬವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬಿ.ವೈ ವಿಜಯೇಂದ್ರ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪ್ರಚೋದನಾಕಾರಿ ಮತ್ತು ಸುಳ್ಳು ಮಾಹಿತಿಗಳಿರುವ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪದಡಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಯೋಗೇಂದ್ರ ಹೊಡಗಟ್ಟ ಎಂಬವರು ಖಾಸಗಿ ದೂರು ದಾಖಲಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಿ.ಕೆ. ಶಿವಕುಮಾರ್ ಮತ್ತು ಬಿ.ಆರ್. ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರಿಗೆ ಸೂಚನೆ ನೀಡಿದೆ. ತನಿಖೆ ನಡೆಸಿದ ಬಳಿಕ ಮಾರ್ಚ್ 30ರಂದು ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ವಿಜಯೇಂದ್ರ ಅವರ ಪರವಾಗಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ಅದನ್ನು ಕೋರ್ಟ್ ಪರಿಶೀಲಿಸಿ ಹೈಗ್ರೌಂಡ್ಸ್ ಪೊಲೀಸರಿಗೆ ಸೂಚನೆಯನ್ನು ನೀಡಿದೆ.