ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ

Prasthutha|

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ವಾಪಾಸ್ ಕಳಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ರಾಜಭವನಕ್ಕೆ ಮುತ್ತಿಗೆ ನಡೆಯಲಿದೆ. ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಮುತ್ತಿಗೆ ನಡೆಯಲಿದೆ.

- Advertisement -

ಕನ್ನಡ ನಾಮಫಲಕ, ಶಾಸನ ಸಭೆಯಲ್ಲಿ ಮಸೂದೆ ಆಗಲೇಬೇಕು. ಮಸೂದೆಗೆ ರಾಜ್ಯಪಾಲರ ಅಂಗೀಕಾರ ನೀಡಬೇಕೆಂದು ಒತ್ತಾಯಿಸಿ ದಿನಾಂಕ 07-02-2024ರ ನಾಳೆ ಮಧ್ಯಾಹ್ನ 12 ಗಂಟೆಗೆ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ನಾವು ರಾಜಭವನಕ್ಕೆ ಮುತ್ತಿಗೆ ಹಾಕುತ್ತಿರೋದರ ಹಿನ್ನಲೆ ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯ ಮಾಡೋ ಮಸೂದೆಗೆ ಅಂಕಿತ ಹಾಕಬೇಕು ಎಂಬುದಾಗಿದೆ. ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಕಲಿಯಲೇಬೇಕು. ರೈಲ್ವೆ, ಬ್ಯಾಂಕ್ ನಲ್ಲಿ ಕನ್ನಡ ಕಡ್ಡಾಯವಾಗಬೇಕು. ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -

ಇಂದಿನ ರಾಜಭವನ ಮುತ್ತಿಗೆ ಕಾರ್ಯಕ್ರಮದಲ್ಲಿ ಕನ್ನಡ ಒಕ್ಕೂಟದ ಮುಖಂಡ ಹಾಗೂ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ವಿ. ಗಿರೀಶ್ ಗೌಡ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎಂದು ವಾಟಾಲ್ ನಾಗರಾಜ್ ತಿಳಿಸಿದ್ದಾರೆ.




Join Whatsapp