Home ಟಾಪ್ ಸುದ್ದಿಗಳು ಪ್ರಚೋದನಕಾರಿ ಪೋಸ್ಟ್: ಹುಬ್ಬಳ್ಳಿ ಉದ್ವಿಗ್ನ !

ಪ್ರಚೋದನಕಾರಿ ಪೋಸ್ಟ್: ಹುಬ್ಬಳ್ಳಿ ಉದ್ವಿಗ್ನ !

ಹುಬ್ಬಳ್ಳಿ: ಸಂಘಪರಿವಾರದ ಕಾರ್ಯಕರ್ತನೋರ್ವ ಮಸೀದಿ ಚಿತ್ರದ ಭಗವಾಧ್ವಜ ಹಾರಿಸಿದ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಗಲಾಟೆ ಆಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ.

ಧಾರ್ಮಿಕತೆಗೆ ಧಕ್ಕೆ ಉಂಟಾಗುವ ವೀಡಿಯೋ ಪೋಸ್ಟ್ ಮಾಡಿದ್ದು, ಯುವಕನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದಾರೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಪೊಲೀಸ್ ವಾಹನಗಳು ಜಖಂಗೊಂಡಿವೆ. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

 ಪರಿಸ್ಥಿತಿ ನಿಯಂತ್ರಿಸಲು ನಗರದಲ್ಲಿ 144 ಸೆಕ್ಷನ್ ಹಾಕಲಾಗುವುದು ಎಂದು ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದ್ದಾರೆ.

Join Whatsapp
Exit mobile version