Home ಜಾಲತಾಣದಿಂದ ಪ್ರಚೋದನಕಾರಿ ಭಾಷಣ| ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಪ್ರಚೋದನಕಾರಿ ಭಾಷಣ| ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಮುನಿರತ್ನಗೆ ಜಾಲಹಳ್ಳಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುನಿರತ್ನ ವಿರುದ್ಧ ಬುಧವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿತ್ತು. ಇದರ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

Join Whatsapp
Exit mobile version