ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

Prasthutha|

ಬೆಂಗಳೂರು: ಲೋಕ ಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

- Advertisement -

ಬರತ್ ಸೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ವಿಚಾರಣೆ ನಡೆಸಿ, ಈ ಆದೇಶ ನೀಡಿದೆ.

ಜುಲೈ 8ರಂದು ಕಾವೂರು ಜಂಕ್ಷನ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಭರತ್ ಶೆಟ್ಟಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಹಲ್ಲೆ ನಡೆಸಲು ಪ್ರಚೋದಿಸುವಂತೆ ಅವಹೇಳನಗೈದು ಹೇಳಿಕೆ ನೀಡಿದ್ದರು. ಈ ಬಗ್ಗೆ ಅವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.



Join Whatsapp