PFI- SDPI ಕಾರ್ಯಕರ್ತರ ವಿರುದ್ಧ ಶ್ರೀರಾಮ ಸೇನೆ ಕಾರ್ಯಾಧ್ಯಕ್ಷನಿಂದ ಪ್ರಚೋದನಕಾರಿ ಹೇಳಿಕೆ

Prasthutha|

ಧಾರವಾಡ: ಪಿಎಫ್ ಐ ಹಾಗೂ ಎಸ್ ಡಿಪಿಐ ಸಂಘಟನೆಯವರು ಕಂಡರೆ ನುಗ್ಗಿ ಹೊಡೆಯುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಕರ್ಣಿ, ಪಿಎಫ್ ಐ ಹಾಗೂ ಎಸ್ ಡಿಪಿಐ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು. ಈ ಸಂಘಟನೆಗಳನ್ನು ಬ್ಯಾನ್ ಮಾಡದೇ ಹೋದಲ್ಲಿ ಆ ಸಂಘಟನೆಗಳ ಕಾರ್ಯಕರ್ತರನ್ನು ನಾವೇ ನುಗ್ಗಿ ಹೊಡೆಯಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

Join Whatsapp