ಬೆಂಗಳೂರು: ಪಿಎಸ್ ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್ ಐ ನೇಮಕ ಪರೀಕ್ಷೆ ಮಾಡುತ್ತೇವೆ. ಬೆಂಗಳೂರು ಕೇಂದ್ರದಲ್ಲೇ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು.
ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಪಿಎಸ್ ಐ ಲಿಂಗಯ್ಯ ಹೇಳಿದ್ದಾರೆ. ಆಡಿಯೋ ಸತ್ಯನಾ, ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ. ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್ಐ ನೇಮಕ ಪರೀಕ್ಷೆ ನಡೆಸುತ್ತೇವೆ ಎಂದರು.