ಪ್ರಧಾನಿ ಮೋದಿ ಕಾರ್ಯಕ್ರಮದ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪಿಎಸ್ ಐ ಆತ್ಮಹತ್ಯೆ

Prasthutha|

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ ಐ ಸುದರ್ಶನ್ ಶೆಟ್ಟಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ 51 ವರ್ಷ ವಯಸ್ಸಾಗಿತ್ತು.

- Advertisement -


ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಮಗನೊಂದಿಗೆ ಮನೆಯಲ್ಲಿದ್ದ ಅವರು ಕೊಠಡಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದೆ ಇದ್ದಾಗ ಮಗ ಕೊಠಡಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆ ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಅವರ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದರು. ಅದಾದ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಹನುಮಂತನಗರ ಠಾಣೆ ಪಿಎಸ್ ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು ಎಂದು ತಿಳಿದುಬಂದಿದೆ.
ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp