ಸೆ. 22ಕ್ಕೆ ನಿಗದಿಯಾಗಿದ್ದ PSI ನೇಮಕಾತಿ ಪರೀಕ್ಷೆ ಮುಂದೂಡಿಕೆ

Prasthutha|

- Advertisement -

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ ಈಗ ಅಭ್ಯರ್ಥಿಗಳ ಒತ್ತಾಯಕ್ಕೆ ಮಣಿದ ಸರ್ಕಾರ PSI ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.

ಸೆಪ್ಟೆಂಬರ್ 28ಕ್ಕೆ PSI ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ಸೆ.22ಕ್ಕೆ ನಿಗದಿಯಾಗಿದ್ದ PSI ನೇಮಕಾತಿ ಪರೀಕ್ಷೆ ಮುಂದೂಡಲಾಗಿದ್ದು ಸೆ.28ಕ್ಕೆ ನಡೆಯಲಿದೆ. ಸೆಪ್ಟೆಂಬರ್​​ 22ರಂದು ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆ ಇದೆ. ಹೀಗಾಗಿ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳು, ಬಿಜೆಪಿ ನಾಯಕರು ಸರ್ಕಾರಕ್ಕೆ ಮನವಿ ಮಾಡಿದ್ದರು. ಸದ್ಯ ಈಗ ಮನವಿಯಂತೆ ಸೆ.28ಕ್ಕೆ PSI ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.



Join Whatsapp