Home ಟಾಪ್ ಸುದ್ದಿಗಳು PSI ಪರೀಕ್ಷೆ ಅಕ್ರಮ: ಬ್ಲೂಟೂತ್ ಬಳಸಿ ಪಾಸಾಗಿದ್ದ 8 ಅಭ್ಯರ್ಥಿಗಳ ಬಂಧನ

PSI ಪರೀಕ್ಷೆ ಅಕ್ರಮ: ಬ್ಲೂಟೂತ್ ಬಳಸಿ ಪಾಸಾಗಿದ್ದ 8 ಅಭ್ಯರ್ಥಿಗಳ ಬಂಧನ

ಕಲಬುರಗಿ: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಅಕ್ರಮವಾಗಿ ಪಾಸಾದ 8 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ.


ರವಿರಾಜ್, ಪೀರಪ್ಪ, ಶ್ರೀಶೈಲ್, ಭಗವಂತ, ಸಿದ್ದು ಪಾಟೀಲ್, ಸೋಮನಾಥ, ಕಲ್ಲಪ್ಪ, ವಿಜಯಕುಮಾರ್ ಎನ್ನುವವರೇ ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮವಾಗಿ ಪಾಸಾದ ಬಂಧಿತ ಅಭ್ಯರ್ಥಿಗಳು ಎಂದು ತಿಳಿದು ಬಂದಿದೆ.


ಬಂಧಿತರ ಪೈಕಿ ಸಿದ್ದು ಪಾಟೀಲ್, ಈಗಾಗಲೇ ಎಫ್ ಡಿಎ ಆಗಿ ಸರ್ಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಇನ್ನೂ ಬಂಧಿತ ಕಲ್ಲಪ್ಪ ಪೊಲೀಸ್ ಪೇದೆಯಾಗಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಪೀರಪ್ಪ ಎನ್ನುವ ಇನ್ನೊಬ್ಬ ಬಂಧಿತ ಆರೋಪಿ ಹಾಸ್ಟೆಲ್ ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದು, ಇವರೆಲ್ಲಾ ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ ಐ ಪರೀಕ್ಷೆ ಪಾಸಾದವರಾಗಿದ್ದಾರೆ.


ಈ 8 ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು ಎಂದು ತಿಳಿದು ಬಂದಿದೆ.

Join Whatsapp
Exit mobile version