ಪಿಎಸ್ ಐ ಅಕ್ರಮ ಎಡಿಜಿಪಿ ಅಮೃತ್ ಪೌಲ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Prasthutha|

ಬೆಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಪಿಎಸ್ ಐ ಅಕ್ರಮ ನೇಮಕಾತಿ ಹಗರಣದ ಸಂಬಂಧ ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜುಲೈ 4ರಂದು ಅಮೃತ್ ಪಾಲ್ ಬಂಧಿಸಿದ್ದರು.

ಅಮೃತ್ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಇಂದು ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್ ಪಾಲ್ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

- Advertisement -

ವಕೀಲ ಪ್ರಸನ್ನ ಕುಮಾರ್ ಸಿಐಡಿ ಪರ ವಾದ ಮಂಡಿಸಲಿದ್ದಾರೆ. ಸಿಐಡಿ ಅಧಿಕಾರಿಗಳು 10 ಲಕ್ಷ ಒಳಗೊಂಡಿದ್ದ ಅಮ್ರಿತ್ ಪೌಲ್ ರ 4 ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಲಾಗಿದೆ.

Join Whatsapp