ಕಾರವಾರ: ಪಿಎಸ್’ಐ (PSI) ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗೆ ರಾಜ್ಯಾದ್ಯಂತ ಸದ್ದು ಮಾಡಿದ್ದ ಪಿಎಸ್’ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಿದ್ದಾಪುರ ತಾಲೂಕಿನ ನೆಲಮಾವಿನ ಗಣಪತಿ ಭಟ್ ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಹಲವು ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಇವರು ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬ್ರೋಕರಿಂಗ್ ಕೆಲಸ ಮಾಡುತ್ತಿದ್ದರು.
ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಕಾರಣ ತಿಳಿದುಬಂದಿಲ್ಲ.
PSI ಅಕ್ರಮ ಪ್ರಕರಣ: ವಿಚಾರಣೆ ಎದುರಿಸಿದ್ದ ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ
Prasthutha|