PSI ಅಕ್ರಮ: ಡಿ.23ಕ್ಕೆ ಮರು ಪರೀಕ್ಷೆ

Prasthutha|

ಬೆಂಗಳೂರು: ಹಗರಣದಿಂದ ರದ್ದಾಗಿದ್ದ 545 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

- Advertisement -

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಿಎಸ್ ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ನವೆಂಬರ್ 10ರಂದು ನೀಡಿದ್ದ ತೀರ್ಪಿನ ಅನ್ವಯ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.



Join Whatsapp