ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸೋಮವಾರ ಸಿಐಡಿ ಅಧಿಕಾರಿಗಳಿಂದ ಬಂಧಿತರಾದ ಎಡಿಜಿಪಿ ಅಮೃತ್ ಪೌಲ್ ಅವರನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಸಿಐಡಿ ಪರ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಆರೋಪಿ ಎಡಿಜಿಪಿ ಅಮೃತ್ ಪೌಲ್ ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ ನ್ಯಾಯಾಧೀಶರು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ನೇಮಕಾತಿ ವಿಭಾಗದ ಎಡಿಡಿಪಿಯಾಗಿದ್ದ ಅಮೃತ್ ಪೌಲ್ ಅಕ್ರಮದಲ್ಲಿ ಶಾಮೀಲಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅದಿಕಾರಿಗಳು ನೋಟೀಸ್ ನೀಡಿದ್ದರು. ನೊಟೀಸ್ ಸ್ವೀಕರಿಸಿದ್ದ ಅಮೃತ್ ಪೌಲ್ ನಾಲ್ಕನೇ ಸಲ ವಿಚಾರಣೆ ಹಾಜರಾಗಿದ್ದಾಗ ಇಂದು ಬಂಧಿಸಲಾಗಿತ್ತು.