PSI ಅಕ್ರಮ: ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು

Prasthutha|

ಕಲಬುರಗಿ: ರಾಜ್ಯದ 545 ಪಿಎಸ್’ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

- Advertisement -


ಕಿಂಗ್ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ.


ರಾಜ್ಯದಲ್ಲಿ 2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ ಐ ಹುದ್ದೆಗಳಿಗೆ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು.

Join Whatsapp