Home ಟಾಪ್ ಸುದ್ದಿಗಳು PSI ಅಕ್ರಮ: ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು

PSI ಅಕ್ರಮ: ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು

ಕಲಬುರಗಿ: ರಾಜ್ಯದ 545 ಪಿಎಸ್’ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.


ಕಿಂಗ್ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ.


ರಾಜ್ಯದಲ್ಲಿ 2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ ಐ ಹುದ್ದೆಗಳಿಗೆ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು.

Join Whatsapp
Exit mobile version