ಪಿಎಸ್ ಐ ನೇಮಕಾತಿ ಅಕ್ರಮ: ಆರೋಪಿ ದರ್ಶನ್ ಗೌಡ ಸೆರೆ

Prasthutha|

ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಆರೋಪಿ ದರ್ಶನ್ ಗೌಡನನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ  ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ ಹೇಳಿಕೊಂಡಿದ್ದು ಆತನ ಬಂಧನದ ಮೂಲಕ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ.

 ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ಹಲವರನ್ನು ಸಿಐಡಿ ತನಿಖೆಯ ಬಳಿಕ ಬಂಧಿಸಿದೆ. ಈಗ ಮತ್ತೆ ಬೇಟೆ ಮುಂದುವರೆಸಿದೆ. ಇಂದು ವಿಚಾರಣೆಯ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಹೇಳಿ, ಆ ಬಳಿಕ ನಾಪತ್ತೆಯಾಗಿದ್ದ ಅಭ್ಯರ್ಥಿ ದರ್ಶನ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

- Advertisement -

ಕೆಲ ದಿನಗಳ ಹಿಂದೆ ವಿಚಾರಣೆ ವೇಳೆಯಲ್ಲಿ ದರ್ಶನ್ ಗೌಡ, ಸಚಿವರ ಹೆಸರು ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಬಿಟ್ಟು ಕಳುಹಿಸಲಾಗಿದೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ರಾಜ್ಯಾದ್ಯಂತ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಅವರು ನಾಪತ್ತೆಯಾಗಿದ್ದರು. ರಾಮನಗರ ಜಿಲ್ಲೆಯ ಮಾಗಡಿ ಮೂಲಕ ದರ್ಶನ್ ಗೌಡ ಬಂಧನಕ್ಕೆ ಸಿಐಡಿ ಹುಡುಕಾಟ ನಡೆಸಿತ್ತು. ಇದೀಗ ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ನಡುವೆ ಪ್ರಕರಣದಲ್ಲಿ ಇಲ್ಲಿಯವರೆಗೆ  ಬಂಧಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು ತನಿಖೆಯನ್ನು ತೀವ್ರಗತಿಯಲ್ಲಿ ನಡೆಸಲಾಗುತ್ತಿದೆ.



Join Whatsapp