ಕಲಬುರಗಿ:ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಕಿಂಗ್ ಪಿನ್ ರುದ್ರಗೌಡ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಿನ್ನೆ ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದ ಸಿಬ್ಬಂದಿಯೊಬ್ಬರನ್ನು ಆತ ತಳ್ಳಿ ಪರಾರಿಯಾಗಿದ್ದಾನೆ.
ಆರೋಪಿ ರುದ್ರಗೌಡ ಪಾಟೀಲ್ ವಿರುದ್ಧ ತುಮಕೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ವಿಚಾರಣೆ ನಡೆಸಲು ಪೊಲೀಸರು ಆತನನ್ನು ಬಂಧಿಸಲು ನಗರಕ್ಕೆ ಆಗಮಿಸಿದ್ದು ಅವರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಪಿಎಸ್ಐ ಹಗರಣ:
ಇನ್ಸ್ಪೆಕ್ಟರ್ ಹರೀಶ್ಗೆ ಜಾಮೀನು ನೀಡದ ಹೈಕೋರ್ಟ್ ಸಿಐಡಿ ತಂಡದ ಪಿಎಸ್ಐ ಆನಂದ್ ನೇತೃತ್ವದಲ್ಲಿ ಪೊಲೀಸರು ಆರೋಪಿ ರುದ್ರಗೌಡ ಪಾಟೀಲ್ ಬಂಧಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಆನಂದ್ ತಳ್ಳಿ ಆರೋಪಿ ಪರಾರಿಯಾಗಿದ್ದು, ಸಿಐಡಿ ಪೊಲೀಸರು ಈ ಕುರಿತು ನಗರದ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಹಗರಣ ಬೆಳಕಿಗೆ ಬಂದ ಬಳಿಕ ಪರಾರಿಯಾಗಿದ್ದ. ಬಳಿಕ ಹಗರಣದ ತನಿಖೆ ಕೈಗೊಂಡ ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಆತನನ್ನು ಬಂಧಿಸಿದ್ದರು
ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಆರೋಪಿ ಪದೇ ಪದೇ ವಿಚಾರಣೆಗೆ ಗೈರಾಗುತ್ತಿದ್ದ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಅಭ್ಯರ್ಥಿಗಳಿಗೆ ತನ್ನ ಸಹಚರರ ಮೂಲಕ ಬ್ಲೂ ಟುಥ್ ಡಿವೈಸ್ ಅನ್ನು ರುದ್ರಗೌಡ ಪಾಟೀಲ್ ನೀಡಿ ಲಕ್ಷಾಂತರ ಹಣವನ್ನು ಪಡೆಯುತ್ತಿದ್ದ ಎಂಬುದು ಆರೋಪವಾಗಿದೆ.
ಈ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಹ ನಡೆದಿರುವುದರಿಂದ ಇಡಿ ತನಿಖೆ ಕೈಗೊಂಡಿತ್ತು. ಗುರುವಾರ ಇಡಿ ಪೊಲೀಸರು ರುದ್ರಗೌಡ ಮನೆ ಮೇಲೆ ದಾಳಿ ಮಾಡಿದ್ದರು. ರಾತ್ರಿ ಸಿಐಡಿ ಪೊಲೀಸರು ಬಂಧಿಸಲು ಬಂದಾಗ ಆತ ಮನೆಯಿಂದ ಪರಾರಿಯಾಗಿದ್ದಾನೆ.