Home ಜಾಲತಾಣದಿಂದ PSI ಅಕ್ರಮ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಸಮಾಜವಾದಿ ಪಕ್ಷದಿಂದ ಕಣಕ್ಕೆ

PSI ಅಕ್ರಮ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಸಮಾಜವಾದಿ ಪಕ್ಷದಿಂದ ಕಣಕ್ಕೆ

 ►ಪೊಲೀಸ್​ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣದಲ್ಲಿ ಪ್ರಮುಖ ಆರೋಪಿ ಆಗಿರುವ ರುದ್ರಗೌಡ ಪಾಟೀಲ್ ​ ಚುನಾವಣೆ ಅಖಾಡಕ್ಕೆ ಇಳಿದಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಅವರು ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಹಿನ್ನೆಲೆ ರುದ್ರಗೌಡ ಪಾಟೀಲ್​ ಜೈಲಿನಲ್ಲಿದ್ದು, ಇಂದು ನಾಮಪತ್ರ ಸಲ್ಲಿಸಲು ನ್ಯಾಯಾಲಯದ ಅನುಮತಿ ಪಡೆದಿದ್ದರು. ಪೊಲೀಸ್ ಭದ್ರತೆಯಲ್ಲಿಯೇ ಆಗಮಿಸಿ ಅಫಜಲಪುರ ತಹಶಿಲ್ದಾರ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಜನರು ಹಾಜರಾಗಿದ್ದು, ಆರ್​ಡಿ ಪಾಟೀಲ್ ಇದ್ದ ಪೊಲೀಸ್ ವಾಹನಕ್ಕೆ ಬೆಂಬಲಿಗರು ಹೂಮಳೆ ಸುರಿಸಿದ್ದಾರೆ.

Join Whatsapp
Exit mobile version