ಪಿಎಸ್‌ಐ ಹಗರಣ: ಎಡಿಜಿಪಿ ಅಮ್ರಿತ್ ಪೌಲ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ; ಸಿದ್ದರಾಮಯ್ಯ ಆಗ್ರಹ

Prasthutha|

ಕಲ್ಬುರ್ಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿತ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದು, ಇದರಿಂದ ಯಾವೆಲ್ಲ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

- Advertisement -

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಬಗ್ಗೆ ಸಂಶಯವಿದೆ. ಈ ನಿಟ್ಟಿನಲ್ಲಿ ಸ್ಪಷ್ಟ ಮಾಹಿತಿ ಬಹಿರಂಗವಾಗಬೇಕಾದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೊಳಪಡಿಸಬೇಕು. ಅಲ್ಲದೆ ಅಮ್ರಿತ್ ಪೌಲ್ ಬರೆದ ಡೈರಿ ಕುರಿತೂ ಕೂಲಂಕುಷ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ಈ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದು ಅವರು ಸೂಚಿಸಿದರು.

Join Whatsapp