ಪಿಎಸ್ಐ ಹಗರಣ; ಸರ್ಕಾರಕ್ಕೆ ಕಾಂಗ್ರೆಸ್ ಪಂಚ ಆಗ್ರಹ

Prasthutha|

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಭಾವಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರದ ಮುಂದೆ ಐದು ಆಗ್ರಹಗಳನ್ನು ಮುಂದಿಟ್ಟಿದೆ.

- Advertisement -

ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಾ ಪಂಚ  ಆಗ್ರಹಗಳನ್ನು ಸರಕಾರದ ಮುಂದಿಟ್ಟಿದ್ದಾರೆ.

ಮೊದಲನೇಯದಾಗಿ ಪಿಎಸ್ ಐ ಅಕ್ರಮ ಪ್ರಕರಣದ ತನಿಖೆಯನ್ನು ಕಲ್ಬುರ್ಗಿಯ ಒಂದು ಪರಿಕ್ಷಾ ಕೇಂದ್ರದ ಅಕ್ರಮಕ್ಕೆ ಮಾತ್ರ ಸೀಮಿತಗೊಳಿಸಿದ್ದು ಯಾಕೆ? ರಾಜ್ಯದ ಇತರೆ ಕೇಂದ್ರಗಳಲ್ಲಿನ ಅಕ್ರಮದ ಕುರಿತು ತನಿಖೆ ಯಾವಾಗ? ಅದಕ್ಕೆ ಕಾಲಮಿತಿ ಏನು? ರಾಜ್ಯದ ಇತರೆ ಭಾಗಗಳಲ್ಲಿ ನಡೆದಿರುವ ಅಕ್ರಮದ ತನಿಖೆಯೂ ತ್ವರಿತಗತಿಯಲ್ಲಿ ಆಗಬೇಕು ಎಂದು ಹೇಳಿದ್ದಾರೆ.

- Advertisement -

ಎರಡನೇಯದಾಗಿ, ಅನ್ನಪೂರ್ಣೇಶ್ವರಿ ನಗರದಲ್ಲಿ ದಾಖಲಾಗಿರುವ ದೂರಿನ ಪ್ರತಿಯನ್ನೇ ಮುಚ್ಚಿಹಾಕಿ ಪ್ರಕರಣವನ್ನೇ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಹಗರಣದ ತನಿಖೆ ವಿಳಂಬ ಹಾಗೂ ಮುಚ್ಚಿಹಾಕುವ ಪ್ರಯತ್ನವನ್ನು ನಿಲ್ಲಿಸಬೇಕು.

ಮೂರನೇಯದಾಗಿ,  ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ನಾಲ್ಕನೇಯದಾಗಿ ಎಡಿಜಿಪಿ ಅಮೃತ್ ಪೌಲ್ ಅವರ ಹೇಳಿಕೆಯನ್ನು ಸೆಕ್ಷನ್ 164 ಪ್ರಕಾರ ನ್ಯಾಯಾಲಯದ ಮುಂದೆ ದಾಖಲಿಸಿಕೊಳ್ಳಬೇಕು.ಮತ್ತು ಐದನೇಯದಾಗಿ, ಅರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಎಸ್ ಡಿಎ, ಎಫ್ ಡಿಎ, ಪಿಡಬ್ಲ್ಯೂಡಿ, ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಅಕ್ರಮದ ಕುರಿತು ಕೂಡಲೇ ತನಿಖೆ ಆಗಬೇಕು. ಈ ಸರ್ಕಾರ ಬಂದ ನಂತರ ಆಗಿರುವ ಎಲ್ಲ ನೇಮಕಾತಿ ಪ್ರಕ್ರಿಯೆಗಳ ತನಿಖೆ ಆಗಬೇಕು ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.



Join Whatsapp