ಪಿಎಸ್’ಐ ಹಗರಣ: ಅಮೃತ್ ಪಾಲ್ ವಿರುದ್ಧ ಕ್ರಮಕೈಗೊಳ್ಳಲು ಅನುಮತಿಸಿದ ಸರ್ಕಾರ

Prasthutha|

ಬೆಂಗಳೂರು: ಪಿಎಸ್’ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಡಿಜಿಪಿಯಾಗಿದ್ದ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಆರೋಪಿ ಐಪಿಎಸ್ ಅಧಿಕಾರಿಯಾಗಿರುವುದರಿಂದ ಕಾನೂನು ಪ್ರಕ್ರಿಯೆ ಆರಂಭಿಸಲು ಸರ್ಕಾರದ ಒಪ್ಪಿಗೆ ಅಗತ್ಯವಿತ್ತು. ಇದಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಇದೀಗ ತನಿಖೆಗೆ ತನ್ನ ಸಮ್ಮತಿಯನ್ನು ನೀಡಿದೆ.

ಅಮೃತ್ ಪಾಲ್ ಅವರನ್ನು ಹಗರಣದ 35ನೇ ಆರೋಪಿಯನ್ನಾಗಿ ಮಾಡಲಾಗಿದ್ದು, ಸಿಐಡಿ ತನಿಖಾಧಿಕಾರಿ ಡಿವೈಎಸ್ ಪಿ ಬಿ.ಕೆ. ಶೇಖರ್ ಅವರು ಹಗರಣದಲ್ಲಿ ಅಮೃತ್ ಪಾಲ್ ವಿರುದ್ಧ 78 ದಾಖಲೆಗಳು, 38 ಸಾಕ್ಷಿಗಳನ್ನು ಸಲ್ಲಿಸಿದ್ದು, ಪಾಲ್ ಅವರ ಪಾತ್ರವನ್ನು ವಿವರಿಸಿದ್ದಾರೆ. ಹಗರಣವನ್ನು ನಡೆಸಲು ಸಂಚು ಮತ್ತು ಸಬ್ ಇನ್ಸ್ ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳಿಂದ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ.

- Advertisement -

ಪಾಲ್ ವಿರುದ್ಧ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.



Join Whatsapp