ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಯಾವೊಬ್ಬ ಅಧಿಕಾರಿಯನ್ನೂ ಬಿಡಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಅವರನ್ನು ಪಿಎಸ್ ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಸೋಮವಾರ ವಶಕ್ಕೆ ಪಡೆದಿದೆ.
ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಆರಗ ಜ್ಞಾನೇಂದ್ರ , “ನೇಮಕಾತಿ ಅಕ್ರಮ ಸಂಬಂಧ ಸೂಕ್ತ ಸಾಕ್ಷಾಧಾರ ಸಂಗ್ರಹಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗಿದ್ದ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.