ಕಾಟಿಪಳ್ಳದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ; 140 ಯುನಿಟ್ ರಕ್ತ ಸಂಗ್ರಹ

Prasthutha|

ಮಂಗಳೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕಾಟಿಪಳ್ಳ ಹಾಗೂ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಾಟಿಪಳ್ಳದಲ್ಲಿ ನಡೆಯಿತು.

- Advertisement -


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ ಫಾರಂ ಕಾಟಿಪಳ್ಳ ಇದರ ಗೌರವಾಧ್ಯಕ್ಷ ಜನಾಬ್ ಮುಹಮ್ಮದ್ ವಹಿಸಿದ್ದರು. ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುರತ್ಕಲ್ ಡಿವಿಷನ್ ಅಧ್ಯಕ್ಷ ಹನೀಫ್ ಕಾಟಿಪಳ್ಳ ಉದ್ಘಾಟಿಸಿ, ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಎದುರಾಗಿದೆ. ಇದನ್ನು ಮನಗಂಡು ಪಾಪ್ಯುಲರ್ ಫ್ರಂಟ್ ರಾಜ್ಯಾದ್ಯಂತ ರಕ್ತದಾನ ಶಿಬಿರ ಆಯೋಜಿಸುತ್ತಿದೆ ಎಂದರು.


ಮುಖ್ಯ ಅತಿಥಿಗಳಾಗಿ ಕಾಟಿಪಳ್ಳ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಹ್ಮದ್ ಬಾವ ಅಯ್ಯೂಬ್, ಇಂಡಿಯನ್ ಸೋಶಿಯಲ್ ಫಾರಂ ಒಮಾನ್ ಇದರ ಪ್ರತಿನಿಧಿ ಶಹಾಬುದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುರತ್ಕಲ್ ಡಿವಿಷನ್ ಇದರ P.R.O ರಫೀಕ್ ಕುಳಾಯಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಪ್ರತಿನಿಧಿ ಡಾ..ಜೆ.ಎನ್.ಭಟ್, ಸಮಾಜ ಸೇವಕ ಹುಸೈನ್ ಕಾಟಿಪಳ್ಳ ಉಪಸ್ಥಿತರಿದ್ದರು.

- Advertisement -


ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುರತ್ಕಲ್ ಡಿವಿಷನ್ ಅಧ್ಯಕ್ಷ ಜನಾಬ್ ಹನೀಫ್ ಕಾಟಿಪಳ್ಳ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ನಿಶಾದ್ ಕಾರ್ಯಕ್ರಮ ನಿರೂಪಿಸಿದರು. ಶಮೀರ್ ಕಾಟಿಪಳ್ಳ ವಂದಿಸಿದರು. ಶಿಬಿರದಲ್ಲಿ ಒಟ್ಟು 140 ಯುನಿಟ್ ರಕ್ತ ಸಂಗ್ರಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp