Home ಕರಾವಳಿ ಸಾರ್ವಜನಿಕ ಸೌಹಾರ್ದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಾರ್ವಜನಿಕ ಸೌಹಾರ್ದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ನ್ಯೂ ಫ್ರೆಂಡ್ಸ್ ಕ್ಲಬ್ ಸೌಹಾರ್ದ ನಗರ ಮತ್ತು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಹಾಗೂ ಯೆನೆಪೋಯ ರಕ್ತನಿಧಿ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸಾರ್ವಜನಿಕ ಸೌಹಾರ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಮುರನಗರ ಜಂಕ್ಷನ್ ನಲ್ಲಿ ನ್ಯೂ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಹಕೀಂ ಪ್ಯಾರಾ ಅಧ್ಯಕ್ಷತೆಯಲ್ಲಿ ನಡೆಯಿತು.


ಎಸ್’ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೊ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಂದಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ, ಮಸ್ಜಿದ್ ರಹ್ಮಾನ್ ನ್ಯೂ ಸೈಟ್ ಅಧ್ಯಕ್ಷ ಅಝೀಝ್ ಪಟ್ಟಾಡ್ಡಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಖಾದರ್ ಜರಿನಗರ, ಮೂಲ್ಕಿ ಮೂಡಬಿದ್ರೆ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ನಿಸಾರ್ ಕರಾವಳಿ, ಗ್ರಾಮ ಪಂಚಾಯತ್ ಮಾಜಿ ಸದ್ಯಸರಾದ ಸಿರಾಜ್ ಹುಸೈನ್, ಎಂ.ಕೆ ಅಶ್ರಫ್, ಶರ್ಮಿಳಾ ಬ್ಲಡ್ ಹೆಲ್ಪ್ ಕೇರ್ ಅಧ್ಯಕ್ಷ ನಝೀರ್ ಹುಸೈನ್ ಮಂಚಿಲ, ಎಸ್’ಡಿಪಿಐ ಬಜ್ಪೆ ಪಟ್ಟಣ ಪಂಚಾಯತ್ ವಲಯ ಅಧ್ಯಕ್ಷ ಇಸ್ಮಾಯಿಲ್ ಇಂಜಿನಿಯರ್, DSS ಮುರ ನಗರ ಸಂಚಾಲಕ ಸತೀಶ್ ಸಾಲ್ಯಾನ್ ಉಪಸ್ಥಿತರಿದ್ದರು.


ನ್ಯೂ ಫ್ರೆಂಡ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಸ್ವಾಗತಿಸಿದರು,ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಒಟ್ಟು 76 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Join Whatsapp
Exit mobile version