ಬೆಂಗಳೂರು : ರಾಜ್ಯದಲ್ಲಿ ಪಿಯುಸಿ ಮರು ಪರೀಕ್ಷೆ ಬರೆಯುವ ಮಕ್ಕಳಿಗೆ ಸರಕಾರ ಸಿಹಿ ಸುದ್ದಿ ನೀಡಿದೆ.
ಈ ಕುರಿತು ರಾಜ್ಯ ಸರಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು ಪ್ರಸಕ್ತ ಸಾಲಿನಲ್ಲಿ ಮರು ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವಂತೆ ನಿರ್ಧಾರ ಮಾಡಿದೆ. ಈ ಸಂಬಂಧ ಹೈಕೋರ್ಟಿಗೆ ರಾಜ್ಯ ಸರಕಾರ ಹೇಳಿಕೆ ನೀಡಿದೆ..
76,387 ರಿಪೀಟರ್ಸ್ ವಿದ್ಯಾರ್ಥಿಗಳು ಯಾರಿದ್ದಾರೆ ಅವರೆಲ್ಲರಿಗೂ ಪರೀಕ್ಷೆ ಬರೆಯದೆ ಪಾಸ್ ಮಾಡುವುದಾಗಿ ಸರಕಾರ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಈ ಸಂಬಂಧ ಹೈಕೋರ್ಟಿಗೆ ವರದಿ ಸಲ್ಲಿಸಿರುವ ಸರಕಾರ ವಿದ್ಯಾರ್ಥಿಗಳಿಗೆ 35 ಅಂಕಗಳನ್ನು ನೀಡಿ ಪಾಸ್ ಮಾಡುತ್ತೇವೆ ಅನ್ನುವ ಮಾಹಿತಿಯನ್ನು ಸಲ್ಲಿಸಿದೆ. 12 ಜನ ತಜ್ಞರ ವರದಿಯನ್ನು ಆಧರಿಸಿ ಸರಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಖಾಸಗೀ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯನ್ನು ನಡೆಸುವುದಕ್ಕೆ ಸರಕಾರ ತೀರ್ಮಾನ ಮಾಡಿವೆ.
ಇನ್ನು ಆಗಸ್ಟ್ 31 ರಂದು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಮತ್ತು ಶಿಕ್ಷಣ ಇಲಾಖೆಗೆ ಆದೇಶವನ್ನು ನೀಡಿದೆ.