Home ಟಾಪ್ ಸುದ್ದಿಗಳು ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ | ರಿಸಲ್ಟ್​ ನೋಡುವುದು ಹೇಗೆ? ಇಲ್ಲಿದೆ...

ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ | ರಿಸಲ್ಟ್​ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆ 4.30 ಕ್ಕೆ ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶ ನೋಡಲು ನೋಂದಣಿ ಸಂಖ್ಯೆ ಪಡೆದುಕೊಳ್ಳಬೇಕು. ಇಲಾಖೆ ವೆಬ್ ಸೈಟ್ ನಲ್ಲಿ ‘Know my registration number’ಲಿಂಕ್ ನೀಡಿ ಆ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದು ಎಂದು ಹೇಳಿದರು.

ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಫಲಿತಾಂಶವನ್ನು http://karresults.nic.in ಈ ವೆಬ್​ಸೈಟ್​ ಮೂಲಕ ನೋಡಬಹುದು.

ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿ ಎಲ್ಲಾ ವಿದ್ಯಾರ್ಥಿಗಳನ್ನ ಸರ್ಕಾರ ಪಾಸ್ ಮಾಡಿತ್ತು. ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲು ವಿದ್ಯಾರ್ಥಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಶೇ.10 ಇಂಟರ್ನಲ್ ಅಸೆಸ್ಮೆಂಟ್ ಅಂಕಗಳ ಆಧಾರದಲ್ಲಿ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ ಎಂದರು.

Join Whatsapp
Exit mobile version