PUC ವಿದ್ಯಾರ್ಥಿನಿ ಆತ್ಮಹತ್ಯೆ: ಶಿಕ್ಷಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ !

Prasthutha|

ಕೊಯಮತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

- Advertisement -

ಯಾರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಆಕೆಯ ಪೋಷಕರು ಮತ್ತು ಸ್ನೇಹಿತರು ಶಾಲಾ ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪದೇ ಪದೆ ಶಿಕ್ಷಕನ ಲೈಂಗಿಕ ಕಿರುಕುಳದಿಂದಾಗಿ ಆಕೆ ಒತ್ತಡಕ್ಕೊಳಗಾಗಿದ್ದಳು. ಅದೇ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಆರೋಪ ಮಾಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ಸೊಸೈಡ್ ನೋಟ್ ಬರೆದಿಟ್ಟಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿರುವ ಪೋಷಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

Join Whatsapp