ಮಂಗಳೂರು: ಪುದು ಗ್ರಾಮ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿ ನಡೆದಿದ್ದು, ಈ ವೇಳೆ ಮತದಾನ ಮಾಡಿದ ಎಲ್ಲಾ ಮತದಾರರಿಗೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಕೃತಜ್ಞತೆಗಳನ್ನು ಸಲ್ಲಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಅವರು, ಮತದಾನವು ಶಾಂತಿಯುತವಾಗಿ ಕೊನೆಗೊಂಡಿದ್ದು ಇದಕ್ಕೆ ಸಹಕರಿಸಿದ ಪುದು ಗ್ರಾಮದ ಎಲ್ಲಾ ನಾಗರಿಕರಿಗೂ, ಸಹಕರಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೂ SDPI ಪಕ್ಷದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.