ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 48 ವಾಹನಗಳು ಜಖಂ

Prasthutha|

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕನಿಷ್ಠ 30 ಮಂದಿ ಗಾಯಗೊಂಡಿದ್ದು, 48 ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ.

- Advertisement -

ಭಾನುವಾರ ರಾತ್ರಿ ಪುಣೆಯ ನಾವಲೆ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡ ಟ್ರಕ್  ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದ್ದು, ಟ್ರಕ್ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪುಣೆ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್ ಡಿಎ) ಅಗ್ನಿಶಾಮಕ ದಳ ತಿಳಿಸಿದೆ.

- Advertisement -

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.  

ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

Join Whatsapp