ಪುಣೆ: ಪ್ರವಾದಿ ಮುಹಮ್ಮದ್ ಕುರಿತು ಟ್ವಿಟರ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್ ವಿರುದ್ಧ ಪುಣೆ ಸಿಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಿಠಾ ನಗರದ ನಿವಾಸಿ ಝಾಕಿರ್ ಶೇಖ್ ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಜೂನ್ 2 ರಂದು ಟ್ವಿಟರ್ ನಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಜಿಂದಾಲ್ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಮುಸ್ಲಿಮರ ಭಾವನೆಗೆ ಧಕ್ಕೆ ತಂದಿದೆ ಎಂದು ಶೇಖ್ ಅವರು ದೂರು ನೀಡಿದ್ದರು.
ಪೊಲೀಸರು ಈ ಪ್ರಕರಣದಲ್ಲಿ ಜಿಂದಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 (ಎ), 153 (ಬಿ), 295 (ಎ), 298 ಹಾಗೂ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.