ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಂಜು ಈ ಅವಘಡಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಅಪಘಾತದ ನಂತರ ಹೆಲಿಕಾಪ್ಟರ್ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ.
ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಲಿಕಾಪ್ಟರ್ನಲ್ಲಿನ ಬೆಂಕಿಯನ್ನು ಇನ್ನೂ ನಂದಿಸಲಾಗಿಲ್ಲ. ಕಳೆದ 40 ದಿನಗಳಲ್ಲಿ ಪುಣೆಯಲ್ಲಿ ಇದು ಎರಡನೇ ಘಟನೆಯಾಗಿದೆ.