Home ಟಾಪ್ ಸುದ್ದಿಗಳು ಪುಣೆ: ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಪುಣೆ: ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ ನಡೆದ ಬೆನ್ನಲ್ಲೇ ಪುಣೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ.


ಟ್ರಕ್ ಒಂದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಇದಾದ ನಂತರ ಟ್ರಕ್ ಚಾಲಕ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ, ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ಸೋಮವಾರ ರಾತ್ರಿ ಪುಣೆಯ ಅಹಮದ್ ನಗರ ರಸ್ತೆಯ ಚಂದನ್ ನಗರ ಪ್ರದೇಶದಲ್ಲಿ ರಾತ್ರಿ 10.30ರ ಸುಮಾರಿಗೆ ಬೈಕ್ ನಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದಿದ್ದು, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವನ್ನಪ್ಪಿದ್ದಾರೆ.

Join Whatsapp
Exit mobile version