ಚೆನ್ನೈ: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ತಮಿಳುನಾಡು ವಿಧಾನಸಭೆಯ ಸದನದಲ್ಲಿ ಗೌರವ ಸಲ್ಲಿಸಲಾಗಿದೆ.
ಈ ವೇಳೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್, ಕನ್ನಡದ ಮೇರು ನಟ ಪುನೀತ್ ರಾಜ್ ಕುಮಾರ್ ಕೇವಲ ನಟ ಮಾತ್ರ ಆಗಿರದೇ, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಇದರಿಂದಾಗಿ ಜನ ಅವರನ್ನು ಇಂದಿಗೂ ನೆನೆಸುತ್ತಾರೆ. ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಪುನೀತ್ ಗೆ ಸಂತಾಪ ಸೂಚಿಸಿ ಗೌರವ ಸಲ್ಲಿಸುವುದಾಗಿ ತಿಳಿಸಿದರು.
ಮಾತ್ರವಲ್ಲ ಒಂದು ನಿಮಿಷ ಮೌನಾಚರಣೆ ಮೂಲಕ ನಟ ಪುನೀತ್ ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.