ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಪುನೀತ್ ಕೆರೆಹಳ್ಳಿ ಬಂಧನ

Prasthutha|

►ಠಾಣೆಯಲ್ಲಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

- Advertisement -


ಬೆಂಗಳೂರು:ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಪುನೀತ್ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾತ್ರಿ 12 ಗಂಟೆಗೆ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿಲಾಗಿತ್ತು. ಬಂಧನದ ಬಳಿಕ ಠಾಣೆಯಲ್ಲಿ ಮಲಗಿದ್ದಾಗ ಮುಂಜಾನೆ 4.45ರಲ್ಲಿ ಅಸ್ವಸ್ಥಗೊಂಡಿದ್ದಾರೆ. ಪುನೀತ್ ನನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದ್ದು ಇದೀಗ ಕೆ.ಸಿ.ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಶುಕ್ರವಾರ ರಾತ್ರಿ ಜೈಪುರದಿಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್ ಗಳಲ್ಲಿ 4,500 ಕೆಜಿ ಕುರಿ ಮಾಂಸ ಸಾಗಿಸಲಾಗಿದ್ದು, ಇದರಲ್ಲಿ ನಾಯಿ ಮಾಂಸವನ್ನು ಕೂಡಾ ಸೇರ್ಪಡೆ ಮಾಡಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾರೆ.

- Advertisement -


ರೈಲಿನಿಂದ ಈ ಬಾಕ್ಸ್ ಗಳನ್ನು ಹೊರಗೆ ತರುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಮತ್ತು ಇತರರು ರೈಲು ನಿಲ್ದಾಣದಲ್ಲೇ ಬಾಕ್ಸ್ ಗಳ ರವಾನೆಗೆ ಅಡ್ಡಿಪಡಿಸಿದ್ದರು.


ಇದಕ್ಕೆ ಪ್ರತಿಕ್ರಯಿಸಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್ಕಾಲ್ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.



Join Whatsapp