ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನಾಯಿ ಮಾಂಸ ಸಾಗಣೆ ಆರೋಪ ಹೊರಿಸಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಶಾಂತಿ ಭಂಗ ಉಂಟುಮಾಡಿರುವ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.
ಮಾಂಸ ಮಿಶ್ರಿತವಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಸದಸ್ಯರು ಜುಲೈ 26ರಂದು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಾಂಸದ ಬಾಕ್ಸ್ಗಳನ್ನು ತಡೆದು ಪ್ರತಿಭಟಿಸಿದ್ದರು.