ಮಟನ್ ಮಾಂಸದ ಬಾಕ್ಸ್’ಗೆ ತಡೆವೊಡ್ಡಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ

Prasthutha|

- Advertisement -

ರೋಲ್ ಕಾಲ್ ಮಾಡಲು ಬಂದಿದ್ದ ಎಂದ ಮಾಂಸ ವ್ಯಾಪಾರಿ

ಬೆಂಗಳೂರು: ಮಟನ್ ಮಾಂಸದ ಬಾಕ್ಸ್ ತಡೆದು ಪುನೀತ್ ಕೆರೆಹಳ್ಳಿ‌ ಗುಲ್ಲೆಬ್ಬಿಸಿರುವ ಘಟನೆ
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪ ಮಾಡಿದ್ದಾನೆ.

- Advertisement -

ಈ ಬಗ್ಗೆ ಮಾತನಾಡಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತೆ ಎಂದರು.



Join Whatsapp
Exit mobile version