ಮುಸ್ಲಿಮ್ ಯುವಕನ ಕೊಲೆ: ಸಂಘಪರಿವಾರದ ಪುನೀತ್ ಕೆರೆಹಳ್ಳಿ ಬಂಧನ!

Prasthutha|

ಕನಕಪುರ: ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಸಂಬಂಧ ಸಂಘಪರಿವಾರದ ಗೂಂಡಾ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.

ಇವರು ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನ ತಡೆದಿದೆ. ಈ ವೇಳೆ ಅದರಲ್ಲಿ ಇದ್ದ ಇದ್ರೀಸ್ ಪಾಷಾ ಮತ್ತೊಬ್ಬರು ತಪ್ಪಿಸಿಕೊಂಡಿದ್ದರು. ಅವರನ್ನು ಬೆನ್ನಟ್ಟಿದ ಕೆರೆಹಳ್ಳಿ ತಂಡ ಥಳಿಸಿ ಹತ್ಯೆ ಮಾಡಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸಂದರ್ಭ ವಾಹನದಿಂದ ಇಳಿದು ಇದ್ರೀಸ್ ಪಾಷಾ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿದೆ.

ಇದ್ರೀಸ್ ಪಾಷಾ ಅವರನ್ನು ಪುನೀತ್ ಕೆರೆಹಳ್ಳಿ ಹಾಗೂ ಮತ್ತಿತರರೇ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕು’ ಎಂದು ಆರೋಪಿಸಿ ಅವರ ಕುಟುಂಬಸ್ಥರು ಶನಿವಾರ ಸಾತನೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -