ಗೂಂಡಾ ಕಾಯ್ದೆ ರದ್ದು: ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ

Prasthutha|

- Advertisement -

ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಿದ್ದು, ಆತನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.

- Advertisement -

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ್, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿಯಾಗಿದ್ದಾನೆ.

ಪುನೀತ್ ಕೆರೆಹಳ್ಳಿ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಲ್ಲದೇ, ಕೂಡಲೇ ಸಿಸಿಬಿ ಪೊಲೀಸರು ಬಂಧಿಸಿ, ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.