ಕೃಷಿ ಕಾಯ್ದೆ ವಿರೋಧಿಸಿ ರಾಜಿನಾಮೆ ನೀಡಿದ ಪಂಜಾಬ್ ಬಿಜೆಪಿ ಶಾಸಕ

Prasthutha|

ಪಂಜಾಬ್ : ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಯನ್ನು ವಿರೋಧಿಸಿ ರೋಝ್‌ ಪುರದಲ್ಲಿ ಎರಡು ಬಾರಿ ಬಿಜೆಪಿಯಿಂದ ಚುನಾವಣೆಗೆ ಸ್ಫರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಸುಖ್ಪಾಲ್‌ ಸಿಂಗ್‌ ನನ್ನೂ ರವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಫಿರೋಝ್‌ ಪುರದಿಂದ ಅವರು 2002 ಮತ್ತು 2007ರಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಆದರೆ 2021 ಮತ್ತು 2017ರಲ್ಲಿ ಅವರು ಪರಾಜಿತರಾಗಿದ್ದರು.

- Advertisement -

ಈ ಕುರಿತು ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ನನ್ನೂ, ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ಹಲವಾರು ಮಂದಿ ರೈತರು ಮೃತಪಟ್ಟಿರುವುದು ನನಗೆ ಮತ್ತು ನನ್ನ ಬೆಂಬಲಿಗರಿಗೆ ಅಸಮಾಧಾನ ತಂದಿದೆ. 2022ರ ವಿಧಾನಸಭಾ ಚುನಾವಣೆಗೆ ಮುಂಚೆ ಏನಾದರೂ ನಿರ್ಧಾರ ಕೈಗೊಳ್ಳಬೇಕೆಂದು ನನ್ನ ಬೆಂಬಲಿಗರು ತಿಳಿಸಿದ್ದರು ಎಂದು ಅವರು ಹೇಳಿದ್ದಾರೆ.ಸದ್ಯ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವ ತೀರ್ಮಾನ ಕೈ ಗೊಂಡಿಲ್ಲ ಎಂದು ಹೇಳಿದರು.

Join Whatsapp