Home ಟಾಪ್ ಸುದ್ದಿಗಳು ಪಂಜಾಬ್ | ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಂದಿನ ವಾರ ಬಿಜೆಪಿ ಸೇರ್ಪಡೆ !

ಪಂಜಾಬ್ | ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಂದಿನ ವಾರ ಬಿಜೆಪಿ ಸೇರ್ಪಡೆ !

ಚಂಡೀಗಡ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಮುಂದಿನ ವಾರ ಬಿಜೆಪಿ ಸೇರುವುದಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ವರ್ಷ ಮುಖ್ಯಮಂತ್ರಿ ಹುದ್ದೆಯಿಂದ ಹೇಳದೆ ಕೇಳದೆ ತೆಗೆದರು ಎಂದು ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿದ್ದರು.

ಪಕ್ಷದ ವಕ್ತಾರರು ಮಾತನಾಡಿ, ನಮ್ಮ ಇಡೀ ಪಕ್ಷವು ಬಿಜೆಪಿಯಲ್ಲಿ ವಿಲೀನವಾಗಲಿದೆ ಎಂದು ತಿಳಿಸಿದರು.

ಅಮರೀಂದರ್ ಸಿಂಗ್ ರಿಗೆ ಈಗ 80ರ ಪ್ರಾಯ. ಆದರೆ ರಾಜಕೀಯದಿಂದ ದೂರ ಉಳಿಯುವ  ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಮುಂದಿನ ವಾರ ದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾನು ಬಿಜೆಪಿ ಸೇರುವುದಲ್ಲದೆ, ನಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಲಾಗುವುದು ಎಂದೂ ಅವರು ಹೇಳಿದರು.

Join Whatsapp
Exit mobile version